ಸಾಂದರ್ಭಿಕ ಚಿತ್ರ

ಪಾವಗಡ : ಪಟ್ಟಣ ಸಮೀಪದ ಕಣಿವೆನಹಳ್ಳಿ ಗೇಟ್ ಸಮೀಪ ಕಾರು ಮತ್ತು ಬೈಕ್ ನಡುವೆ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದು ವರದಿಯಾಗಿದೆ.

ಮೃತರು ಮಡಕಶಿರಾ ತಾಲೂಕು, ಗುಡಿಬಂಡೆ ಸಮೀಪದ ಗೊಲ್ಲಹಳ್ಳಿ ಗ್ರಾಮದವರಾಗಿದ್ದು, ಮೃತರನ್ನು ಮೇಘಾ (21), ಶ್ರೀನಿವಾಸ (45), ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಿಡಿಗೇಶಿ ಗ್ರಾಮದ ಕಾರು ಭಾಗಿಯಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor