ಪೋಕ್ಸೊ ಪ್ರಕರಣ | ಅಗತ್ಯವೆನಿಸಿದರೆ ಸಿಐಡಿಯಿಂದ ಯಡಿಯೂರಪ್ಪನವರ ಬಂಧನ : ಜಿ.ಪರಮೇಶ್ವರ್
Update: 2024-06-13 11:33 IST
ಯಡಿಯೂರಪ್ಪ/ಪರಮೇಶ್ವರ್
ತುಮಕೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪೊಲೀಸ್ ಅಧಿಕಾರಿಗಳು ಜೂನ್ 15ರೊಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಾಗಿದ್ದು, ಅಷ್ಟರಲ್ಲ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ" ಎಂದು ಹೇಳಿದರು.
ಈ ಬಗ್ಗೆ ನಾನು ಏನೂ ಹೇಳಲು ಆಗದು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸುತ್ತಾರೆ ಎಂದು ತಿಳಿಸಿದರು.