×
Ad

ಗೊ.ರು.ಚನ್ನಬಸಪ್ಪರಿಗೆ 'ಸಿದ್ಧಗಂಗಾಶ್ರೀ' ಪ್ರಶಸ್ತಿ: ಜ.21ರಂದು ಪ್ರದಾನ

Update: 2025-01-02 10:44 IST

ಗೊ.ರು.ಚನ್ನಬಸಪ್ಪ (PC: X@ABKSSmandya2024)

ತುಮಕೂರು: ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ನೀಡುವ 2024ನೇ ಸಾಲಿನ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ ಆಯ್ಕೆ ಆಗಿದ್ದಾರೆ.

ಪ್ರಶಸ್ತಿಯು ಒಂದು ಲಕ್ಷ ರೂ. ನಗದು, ಅಭಿನಂದನೆ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಜ.21ರಂದು ಸಿದ್ಧಗಂಗಾ ಮಠದಲ್ಲಿ ನಡೆಯುವ ಶಿವಕುಮಾರ ಸ್ವಾಮೀಜಿಯ ಆರನೇ ವರ್ಷದ ಸಂಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಂದು ಸಂಘದ ಕಾರ್ಯದರ್ಶಿ ಕೆ.ಎಚ್.ಶಿವರುದ್ರಯ್ಯ ತಿಳಿಸಿದ್ದಾರೆ.

ಜಾನಪದ ಹಾಗೂ ಶರಣ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಗೊ.ರು.ಚನ್ನಬಸಪ್ಪರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಕೆ.ಎಚ್.ಶಿವರುದ್ರಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News