×
Ad

ತಿಪಟೂರು ಜಿಲ್ಲಾಪಂಚಾಯತ್‌ ಎಇಇ ಲೋಕಾಯುಕ್ತ ಬಲೆಗೆ

Update: 2025-11-11 14:01 IST

ತಿಪಟೂರು : ತಿಪಟೂರು ತಾಲ್ಲೂಕಿನಲ್ಲಿ ನಡೆದ ಕಾಮಗಾರಿಯೊಂದಕ್ಕೆ ಬಿಲ್ ಮಾಡಲು ಲಂಚ ಪಡೆಯುವ ವೇಳೆ ತುಮಕೂರು ಜಿಲ್ಲಾಪಂಚಾಯತ್‌ ತಿಪಟೂರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪ್ರಥಮದರ್ಜೆ ಗುತ್ತಿಗೆದಾರ ಸುನಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತರು ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚಪಡೆಯುತ್ತಿದ್ದ ತಿಪಟೂರು ಜಿಲ್ಲಾಪಂಚಾಯತ್‌ ಇಂಜಿನಿಯರ್ ವಿಭಾಗದ ಎಇಇ ಸ್ವಾಮಿಯನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು,ಇನ್‌ಸ್ಪೆಕ್ಟರ್ ರಾಜು ನೇತೃತ್ವದ ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News