ತಿಪಟೂರು | ಕೆಎಸ್ಸಾರ್ಟಿಸಿ ಬಸ್-ಬೈಕ್ ನಡುವೆ ಅಪಘಾತ; ಇಬ್ಬರು ಮೃತ್ಯು
Update: 2025-05-28 17:59 IST
ತಿಪಟೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಮೃತಪಟ್ಟ ಘಟನೆ ರಾಷ್ಟಿಯ ಹೆದ್ದಾರಿ 206ರ ಕಸಬಾ ಹೋಬಳಿ ಮತ್ತಿಹಳ್ಳಿ ಗೇಟ್ ಬಳಿ ಸಂಭವಿಸಿದೆ.
ತಿಪಟೂರುತಾಲೂಕಿನ ಅಯ್ಯನಬಾವಿಯ ನಿವಾಸಿಗಳಾದ ಉಮೇಶ್ (32), ರಜಿನಿಕಾಂತ್ (33) ಮೃತರು.
ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕರಾದ ಚಂದ್ರಶೇಖರ್, ಸಬ್ ಇನ್ಪೆಕ್ಟರ್ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.