Tumakur | ಗಿಡಗಳ ಮಧ್ಯೆ ಗಾಂಜಾ ಬೆಳೆದ ಪೊಲೀಸ್ ಪುತ್ರನ ಬಂಧನ
ಸಾಂದರ್ಭಿಕ ಚಿತ್ರ
ತುಮಕೂರು : ತೋಟದ ಮಧ್ಯ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಎಸ್‌ಐಯೊಬ್ಬರ ಪುತ್ರನನ್ನು ಚೇಳೂರು ಪೊಲೀಸರು ಬಂಧಿಸಿರುವ ಘಟನೆ ಗುಬ್ಬಿ ತಾಲೂಕಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಂಧಿತ ವ್ಯಕ್ತಿಯನ್ನು ಹಿತೇಂದ್ರ ಎಂದು ತಿಳಿದು ಬಂದಿದ್ದು, ಈತ ಬೋರಯ್ಯ ಎಂಬ ಎಎಸ್‌ಐ ಒಬ್ಬರ ಪುತ್ರ ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಮೇರೆಗೆ ಗುಬ್ಬಿ ಸಿಪಿಐ ರಾಘವೇಂದ್ರ ಅವರು ಗುಡಿ ಗೊಲ್ಲರ ಹಟ್ಟಿಯ ತೋಟವೊಂದರ ಮೇಲೆ ದಾಳಿ ಮಾಡಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಗಸೆ ಗಿಡಗಳ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದು, ಸುಮಾರು 950 ಗ್ರಾಂ ಗಾಂಜಾ ಸೊಪ್ಪು ಪೊಲೀಸರಿಗೆ ಲಭ್ಯವಾಗಿದೆ. ಈ ಸಂಬಂಧ ಚೇಳೂರು ಠಾಣೆಯಲ್ಲಿ ಹಿತೇಂದ್ರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.