×
Ad

ತುಮಕೂರು | ಅಪರಿಚಿತ ವಾಹನ ಢಿಕ್ಕಿ : ಬೈಕ್‌ ಸವಾರ ಮೃತ್ಯು

Update: 2024-08-31 15:10 IST

ತುಮಕೂರು : ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ನಲ್ಲೇಕಾಮನಹಳ್ಳಿ ಗೇಟ್ ನಲ್ಲಿ ನಡೆದಿದೆ.

ಮೃತನನ್ನು ಯುವಕನ್ನು ಕೆ.ಸಿ.ಈರಣ್ಣ(19) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಬೈಕ್ ನಲ್ಲಿ ಬರುತ್ತಿದ್ದ ಕೆ.ಸಿ.ಈರಣ್ಣ ಮಧುಗಿರಿ ತಾಲ್ಲೂಕು ನಲ್ಲೇಕಾಮನಹಳ್ಳಿ ಗೇಟ್ ಸಮೀಪ ಬರುತ್ತಿದ್ದಂತೆಯೇ ಅಪರಿಚಿತ ವಾಹನವೊಂದು ಬೈಕಿಗೆ ಗುದ್ದಿದೆ. ಆ.30ರಂದು ರಾತ್ರಿ 7 ಗಂಟೆ ಸುಮಾರಿನಲ್ಲಿ ಅಪಘಾತ ಸಂಭವಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ದೇಹವನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News