×
Ad

ತುಮಕೂರು | ಗಣೇಶ ವಿಸರ್ಜನೆ ವೇಳೆ ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ಮೃತ್ಯು

Update: 2024-09-15 17:18 IST

ಸಾಂದರ್ಭಿಕ ಚಿತ್ರ

ತುಮಕೂರು : ಗಣೇಶ ವಿಸರ್ಜನೆ ವೇಳೆ ಕೆರೆಗೆ ಇಳಿದಿದ್ದ, ತಂದೆ-ಮಗ ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಸಂಭವಿಸಿದೆ.

ಮೃತರನ್ನು ತಂದೆ ರೇವಣ್ಣ(46), ಪುತ್ರ ಶರತ್(26) ಹಾಗೂ ದಯಾನಂದ ಎಂದು ಹೇಳಲಾಗಿದೆ. ರವಿವಾರ ಗ್ರಾಮದಲ್ಲಿ ಇಟ್ಟಿದ್ದ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News