ತುಮಕೂರು:  ಚಾಮುಂಡೇಶ್ವರಿಯ ವಿಗ್ರಹ ಪ್ರತಿಷ್ಠಾಪಿಸಿರುವ ಅಂಬಾರಿಯನ್ನು ಹೊತ್ತು ಗಜರಾಜ ಲಕ್ಷ್ಮಣ ಸಾಗುವ ಮೂಲಕ ತುಮಕೂರು ದಸರಾ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ದಂಪತಿ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಪುಷ್ಪಾರ್ಚನೆ ಸಲ್ಲಿಸಿದರು.

ವಿವಿಧ ಕಲಾತಂಡಗಳ ಪ್ರದರ್ಶನದೊಂದಿಗೆ 75ಕ್ಕೂ ಹೆಚ್ಚು ಮುಜರಾಯಿ ದೇವಾಲಯಗಳ ಉತ್ಸವ ಮೂರ್ತಿಗಳು ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor