×
Ad

ತುಮಕೂರು: ಬಿಜೆಪಿಯ ಪ್ರತಿಭಟನೆ ವೇಳೆ ಪೊಲೀಸ್‌ ಅಧಿಕಾರಿಗೆ ಗಾಯ

Update: 2024-02-28 15:19 IST

ತುಮಕೂರು: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ವೇಳೆ ಧ್ವಜದ ಪೈಪ್‌ ತಾಗಿ ಡಿವೈಎಸ್‌ ಪಿ ಅವರ ಮೂಗಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ.

ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ, ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಲ್ಲದೇ ಕಾಂಗ್ರೆಸ್‌ ಕಚೇರಿಗೂ ಮುತ್ತಿಗೆ ಹಾಕುವಂತೆ ತಿಳಿಸಿತ್ತು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ತುಮಕೂರಿನ ಭದ್ರಮ್ಮ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ.   ಈ ವೇಳೆ ಧ್ವಜಕ್ಕೆ ಅಳವಡಿಸಲಾಗಿದ್ದ ಪೈಪ್ ಡಿವೈಎಸ್‌ಪಿ ಚಂದ್ರಶೇಖರ್‌ ಅವರ ಮೂಗಿಗೆ ತಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News