×
Ad

ತುಮಕೂರು | ಆಕಸ್ಮಿಕ ಬೆಂಕಿ ತಗುಲಿ 10 ಗುಡಿಸಲುಗಳು ಭಸ್ಮ

Update: 2024-04-26 15:18 IST

ಕೊರಟಗೆರೆ : ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 10 ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಸುಮಾರು 5 ಗ್ಯಾಸ್ ಸಿಲಿಂಡರ್ ಗಳು ಬ್ಲಾಸ್ಟ್ ಆಗಿದೆ ಎನ್ನಲಾಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಮತದಾನ ಮಾಡಲು ಮತಗಟ್ಟೆಗೆ ತೆರಳಿದ್ದ ವೇಳೆ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆಯೂ ಸಿಲಿಂಡರ್ ಬ್ಲಾಸ್ಟ್‌ ಆಗಿ ಅನೇಕ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದ ಸ್ಥಳದಲ್ಲಿ ಮತ್ತೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಹತ್ತಕ್ಕೂ ಹೆಚ್ಚು ಮೇಕೆಗಳು ಗಾಯಗೊಂಡಿದೆ ಎಂದು ಹೇಳಲಾಗಿದೆ.

ಚಿಂಪುಗಾನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗುಡಿಸಲುಗಳಿಗೆ ಬೆಂಕಿ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ನಿವೇಶನ ಹಂಚಿ ಮನೆ ಕಟ್ಟಿಸಿ ಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News