×
Ad

ತುಮಕೂರು: ರೌಡಿ ಶೀಟರ್ ನ ಬರ್ಬರ ಹತ್ಯೆ

Update: 2023-10-22 10:33 IST

ತುಮಕೂರು, .22: ರೌಡಿ ಶೀಟರ್ ಒಬ್ಬನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದ ಘಟನೆ ಬಂಡಿಮನೆ ಕಲ್ಯಾಣ ಮಂಟಪದ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಮಾರುತಿ ಅಲಿಯಾಸ್ ಪೋಲಾರ್ಡ್ (34) ಕೊಲೆಯಾದ ರೌಡಿಶೀಟರ್. ಮಧುಗಿರಿ ಮೂಲದ ಈತ ತುಮಕೂರಿನ ಮಂಚಲಕುಪ್ಪೆ ಬಳಿ ವಾಸವಿದ್ದ. ಕಳೆದ ರಾತ್ರಿ ಬಂಡಿಮನೆ ಕಲ್ಯಾಣ ಮಂಟಪದ ಬಳಿ ತನ್ನ ಸ್ನೇಹಿತರ ಜೊತೆ ಮದ್ಯ ಪಾರ್ಟಿ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ಕೊಲೆ ಮಾಡಿದೆ ಎಂದು ತಿಳಿದುಬಂದಿದೆ.

ಏಳೆಂಟು ವರ್ಷಗಳ ಹಿಂದೆ ನಡೆದಿದ್ದ ಹಟ್ಟಿ ಮಂಜ ಕೊಲೆ ಕೇಸ್ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮಾರುತಿ ಆರೋಪಿಯಾಗಿದ್ದ ಎನ್ನಲಾಗಿದ್ದು, ಇದೇ ದ್ವೇಷಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಕೃತ್ಯ ನಡೆದ ಸ್ಥಳಕ್ಕೆ ಎಸ್ಪಿ ಅಶೋಕ್, ಎಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್, ತಿಲಕಪಾರ್ಕ್ ಠಾಣೆ ಪೊಲೀಸರು,  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ತಿಲಕಪಾರ್ಕ್ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News