×
Ad

Tumkur | ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ: ಗ್ರಾಮ ಆಡಳಿತ ಅಧಿಕಾರಿ ಮೃತ್ಯು

ಅಪಘಾತಕ್ಕೆ ಕೆಲಸದ ಒತ್ತಡವೇ ಕಾರಣ ಎಂದು ಆರೋಪಿಸಿ ಸರಕಾರಿ ನೌಕರರ ಪ್ರತಿಭಟನೆ

Update: 2026-07-04 12:05 IST

ತುಮಕೂರು: ದ್ವಿಚಕ್ರ ವಾಹನ ಮತ್ತು ಲಾರಿ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗೂಳೂರು ಗ್ರಾಪಂನ ಗ್ರಾಮ ಆಡಳಿತ ಅಧಿಕಾರಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ 7 ಗಂಟೆ ವೇಳೆ ನಡೆದಿದೆ.

ಭುವನ್ (24) ಮೃತಪಟ್ಟ ಗ್ರಾಮ ಆಡಳಿತ ಅಧಿಕಾರಿ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭುವನ್ ರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಸರಕಾರಿ ನೌಕರರ ಪ್ರತಿಭಟನೆ

ರಸ್ತೆ ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ಮೃತಪಡಲು ಕೆಲಸದ ಒತ್ತಡವೇ ಕಾರಣ ಎಂದು ಆರೋಪಿಸಿರುವ ಜಿಲ್ಲಾ ಸರಕಾರಿ ನೌಕರರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕೆಲಸದ ಒತ್ತಡವನ್ನು ತಕ್ಷಣ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿ ಧರಣಿ ನಡೆಸಿದರು.

ಸರಕಾರಿ ನೌಕರರು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು ನೇತೃತ್ವದಲ್ಲಿ ಸಿದ್ದಗಂಗಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಮಾಹಿತಿ ತಿಳಿದು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News