×
Ad

ತುಮಕೂರು | ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Update: 2025-07-06 13:54 IST

                                                                  ನಾಗರಾಜು(35)

ತುಮಕೂರು: ತುಮಕೂರಿನ ಲಾಡ್ಜ್ ವೊಂದರಲ್ಲಿ ದಾವಣಗೆರೆಯ ಪಿಎಸ್‌ಐ ಒಬ್ಬರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್‌ಐ ನಾಗರಾಜು(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜು.1 ರಂದು ಹೋಟೆಲ್ ಲಾಡ್ಜ್ ನಲ್ಲಿ ನಾಗರಾಜು ಅವರು ರೂಮ್‌ ಬುಕ್ ಮಾಡಿದ್ದರು. ಇಂದು(ಜು.6) ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದ್ದು, ಸಿಬ್ಬಂದಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳದಲ್ಲಿ ಎರಡು ಪುಟಗಳ ಡೆತ್ ನೋಟ್ ದೊರಕಿದ್ದು, ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News