ತಿಪಟೂರಿನಲ್ಲಿ ರೈಲ್ವೆ, ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದ ಕೇಂದ್ರ ಸಚಿವ ವಿ.ಸೋಮಣ್ಣ
Update: 2026-02-26 14:43 IST
ತುಮಕೂರು. ಫೆ.26: ತಿಪಟೂರಿಗೆ ಭೇಟಿ ನೀಡಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಹಾಯಕ ಸಚಿವ ವಿ.ಸೋಮಣ್ಣ ಶಾರದ ನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿದರು.
ಈ ವೇಳೆ ರೈಲ್ವೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಸಚಿವರು, ತಿಪಟೂರು ಶಾರದ ನಗರ ರೈಲ್ವೆ ಮೆಲ್ಸೇತುವೆ ಕಾಮಗಾರಿ ಹಾಗೂ ಹೊನ್ನವಳ್ಳಿ ರಸ್ತೆ ರೈಲ್ವೆ ಕಾಮಗಾರಿಗಳು ಆಮೆಗತಿಯಲ್ಲಿ ನಡೆಯುತ್ತಿದ್ದು, ಮೇ ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ನಾನು ಭೇಟಿಗೆ ಬರುತ್ತೇನೆ. ಈಗ ಕಾಮಗಾರಿ ಪಿಲ್ಲರ್ ತೆಗೆಯುತ್ತಿದ್ದೀರಿ ನಿಮಗೆ ಜವಾಬ್ದಾರಿ ಇದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ರೈಲ್ವೆ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.