×
Ad

ಫೆ.20ರೊಳಗೆ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತು ಉತ್ತರ ಲಭಿಸಲಿದೆ : ವಿಜಯೇಂದ್ರ

Update: 2025-02-16 19:54 IST

 ಬಿ.ವೈ.ವಿಜಯೇಂದ್ರ

ತುಮಕೂರು : ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆ.20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು(ಫೆ.16) ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯಕ್ಕೆ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನುಡಿದರು.

ಕೇಂದ್ರದ ಶಿಸ್ತು ಸಮಿತಿ ಯತ್ನಾಳರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ, ಏನಾಗುತ್ತಿದೆ ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. 

ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ :

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರಕಾರದ ನಿರ್ಧಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ, 400 ಕೋಟಿ ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರಕಾರದ ನಿರ್ಧಾರ ಶೋಭೆ ತರುವುದಿಲ್ಲ, ಇದರಿಂದ ಒಳಿತಾಗುವುದಿಲ್ಲ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News