×
Ad

ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ

ಸಂಸದರ ಕಚೇರಿಗೆ ಮುತ್ತಿಗೆ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

Update: 2026-05-15 14:13 IST

ಉಡುಪಿ, ಮೇ 15: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

 

ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲಕ ಕೇಂದ್ರ ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿ, ‘ಅಘೋಷಿತ ತುರ್ತು ಪರಿಸ್ಥಿತಿ’ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಯತ್ನಿಸಿದರು. ಆದರೆ ಪೊಲೀಸರು ಡಿಸಿ ಕಚೇರಿ ಗೇಟ್‌ನಲ್ಲಿಯೇ ಪ್ರತಿಭಟನಕಾರರನ್ನು ತಡೆದು ವಶಕ್ಕೆ ಪಡೆದುಕೊಂಡರು.

 ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ, ಮುಖಂಡರಾದ ಸುರಯ್ಯ ಅಂಜುಮ್, ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News