×
Ad

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು

Update: 2025-08-08 12:10 IST

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ಥಾಪಿತ ಪರಶುರಾಮನ ಪ್ರತಿಮೆಗೆ ಸಂಬಂಧಿಸಿದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಸಮಿತಿ ಪ್ರಕಟನೆ ಹೊರಡಿಸಿದೆ.

ಪರಶುರಾಮ ಪ್ರತಿಮೆಯ ಪುನರ್ ನಿರ್ಮಾಣಕ್ಕೆ ಸಂಬಂಧಿಸಿ ಉದಯ ಕುಮಾರ್ ಶೆಟ್ಟಿ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಬೆಂಬಲವಾಗಿ ಈ ಕ್ರಮಕ್ಕೆ ಬರಲಾಗಿದೆ ಎಂದು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ತಿಳಿಸಿದ್ದಾರೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು, ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ಧೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿರುತ್ತದೆ.

ಇದೀಗ ಕಾರ್ಕಳದ ಕಾಂಗ್ರೆಸ್ ನ ಹಿರಿಯ ನಾಯಕ ಉದಯ ಕುಮಾರ್ ಶೆಟ್ಟಿ ನಮ್ಮ ಸಮಿತಿಯು ಹೊಂದಿದ್ದ ಸದುದ್ದೇಶವನ್ನೇ ಇಟ್ಟುಕೊಂಡು ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂಧರ್ಭ ನಮ್ಮ ಸಮಿತಿಯು ಯಾವುದೇ ನಿರ್ಣಯವನ್ನು ಕೈಗೊಂಡರೂ ಕಾನೂನಿನ ತೊಡಕಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಉದಯ್ ಕುಮಾರ್ ಶೆಟ್ಟಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಪೂರ್ಣವಾಗಿ ಬೆಂಬಲ ನೀಡುವ ಉದ್ದೇಶದಿಂದ ಈ ಸಮಿತಿಯನ್ನು ಬರ್ಖಾಸ್ತುಗೊಳಿಸುವ ನಿರ್ಣಯವನ್ನು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಸಭೆ ಸೇರಿ ತೆಗೆದುಕೊಂಡಿದೆ ಎಂದು ಕೃಷ್ಣ ಶೆಟ್ಟಿ ಬಜಗೋಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News