×
Ad

ಉದ್ಯಾವರ: ಬಾಲ ಪ್ರತಿಭೆಗಳ ಸಾಂಸ್ಕೃತಿಕ ಪ್ರದರ್ಶನ ‘ಚಿಗುರು’

Update: 2025-08-11 19:25 IST

ಉಡುಪಿ, ಆ.11: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಪ್ರದರ್ಶನಗಳ ‘ಚಿಗುರು’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಎಜುಕೇಶನ್ ಸೊಸೈಟಿ ಅಧ್ಯಕ್ಷ ಗಣಪತಿ ಕಾರಂತ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಾಲ ಪ್ರತಿಭೆಗಳ ಅನಾವರಣಕ್ಕೆ ಚಿಗುರು ಒಂದು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಅವರೂ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಮತ್ತು ಸಾಂಸ್ಕೃತಿಕ ಚಿಂತಕಿ ಹೇಮಲತಾ, ಕನ್ನಡ ಸಾಹಿತ್ಯ ಪರಿಷತ್‌ನ ಕಾಪು ತಾಲೂಕು ಘಟಕದ ಜತೆ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಹಾಗೂ ಇತರರು ಉಪಸ್ಥಿತರಿದ್ದರು.

‘ಚಿಗುರು’ ಕಾರ್ಯಕ್ರಮದಲ್ಲಿ ಅಭಿರಾಮ್ ಪಾಠಕ್ ಮತ್ತು ತಂಡದಿಂದ ಏಕವ್ಯಕ್ತಿ ಪ್ರದರ್ಶನ, ವೀಕ್ಷಿತಾ ಮತ್ತು ತಂಡ ದಿಂದ ಸುಗಮ ಸಂಗೀತ, ವಿಶ್ವಯಕ್ಷ ನೃತ್ಯಕಲಾ ನಿಕೇತನ ನೀಲಾವರ ಇದರ ಸಂಚಿತಾ ಮತ್ತು ತಂಡದಿಂದ ಶಾಸ್ತ್ರೀಯ ನೃತ್ಯ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಭವಿಷ್ ಮತ್ತು ತಂಡದಿಂದ ಜನಪದ ಗೀತೆ, ಸಾಯಿ ಸ್ವರಾಂಜಲಿ ಹೊಸೂರು ಕರ್ಜೆ ಇದರ ಹೆಚ್ ಪ್ರಣತಿ ಭಟ್ ಮತ್ತು ತಂಡದಿಂದ ಶಾಸ್ತ್ರೀಯ ಸಂಗೀತ ಮತ್ತು ಡಾ.ಚಂದ್ರಶೇಖರ್ ಕಂಬಾರ ಇವರು ರಚಿಸಿ ಸಂತೋಷ್ ನಾಯಕ್ ಪಟ್ಲ ನಿರ್ದೇಶಿಸಿದ ಪುಷ್ಪರಾಣಿ ನಾಟಕ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡವು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ವರ್ಷಾ ಬಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುರಾಧ ಪಿ. ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News