×
Ad

‘ಕಮಲ ಕಲರವ’ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

Update: 2025-08-12 19:43 IST

ಉಡುಪಿ, ಆ.12: ಉಡುಪಿ ನಗರ ಬಿಜೆಪಿ ವತಿಯಿಂದ ‘ಕಮಲ ಕಲರವ’ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ ಉಡುಪಿ ತಾಂಗದಗಡಿ ಶ್ಯಾಮ ಕಮಲ ಗದ್ದೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು. ಪ್ರಗತಿಪರ ಕೃಷಿಕರಾದ ಚಂದ್ರ ಶೇಖರ್ ನಾಯ್ಕ್, ವಿಠಲ ನಾಯಕ್, ಗದ್ದೆಯ ಮಾಲಕ ಪ್ರಕಾಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಹಾಡಿಮನೆ ಗೋಪಾಲ ಶೆಟ್ಟಿ, ಕೆ.ಟಿ.ಪೂಜಾರಿ, ಕೇಶವ ಸಾಲ್ಯಾನ್, ಮೋಹನ್ ಉಪಾಧ್ಯಾಯ, ರಘುರಾಮ ಶೆಟ್ಟಿ, ಮಾಧವ ಅಂಚನ್, ದೇವು ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಕಮಲ ಕಲರವ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಸಾರ್ವಜನಿಕರಿಗೆ ವಿವಿಧ ಕ್ರೀಡೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News