ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2025-08-19 21:45 IST
ಹಿರಿಯಡ್ಕ, ನ.19: ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಪೆರ್ಡೂರು ಗ್ರಾಮದ ಕೆಳಪೈ ಬೆಟ್ಟು ಎಂಬಲ್ಲಿ ಆ.18ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಶಶಿಕಾಂತ (56) ಎಂದು ಗುರುತಿಸಲಾಗಿದೆ. ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಇವರು, ಪೇಟೆಯಿಂದ ಮನೆಗೆ ನಡೆದುಕೊಂಡು ಬರುವಾಗ ಕಾಲು ಜಾರಿ ನೀರು ಹರಿಯುವ ತೋಡಿಗೆ ಬಿದ್ದರೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.