×
Ad

ಪತ್ರಕರ್ತ ಆಸ್ಟ್ರೋ ಮೋಹನ್‌ಗೆ ಕಸಾಪ ಗೌರವ

Update: 2025-08-22 21:04 IST

ಉಡುಪಿ, ಆ.22: ಅಮೆರಿಕದ ಇಮೇಜ್ ಕಾಲಿಂಗ್ ಸೊಸೈಟಿ ಇಂಟರ್ ನ್ಯಾಷನಲ್ ವತಿಯಿಂದ ಗೌರವ ಫೆಲೋಶಿಪ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಛಾಯಾಚಿತ್ರ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್ ಅವರನ್ನು ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಲಾಯಿತು.

ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ.ಸದಾಶಿವ ರಾವ್ ಸನ್ಮಾನ ನೆರೆವೇರಿಸಿದರು. ಕೆಎಂಸಿ ಮಣಿಪಾಲದ ಮೂಳೆ ರೋಗ ತಜ್ಞ ಡಾ.ಕಿರಣ್ ಆಚಾರ್ಯ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಎಚ್.ಪಿ., ಕಸಾಪ ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ಶ್ರೀನಿವಾಸ್, ದೀಪಾ, ವಿದ್ಯಾ ಶಾಮ ಸುಂದರ, ಪ್ರವೀಣಾ ಮೋಹನ್, ಪ್ರತಿಮಾ ಕಿರಣ್, ಪ್ರಸನ್ನ ಶ್ರೀನಿವಾಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News