ದಸಂಸ ನಿಯೋಗದಿಂದ ಉಡುಪಿ ಉಸ್ತುವಾರಿ ಸಚಿವರಿಗೆ ಮನವಿ
ಉಡುಪಿ, ಆ.24: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ನಿಯೋಗ ಇತ್ತೀಚೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿತು.
ಉಡುಪಿ ಜಿಲ್ಲಾ ದಲಿತರ ಡಿಸಿ ಮನ್ನಾ ಭೂಮಿ ಸಮಸ್ಯೆ, ಹಕ್ಕು ಪತ್ರ ಸಮಸ್ಯೆ, ಗುತ್ತಿಗೆ ನೌಕರರ ಸಮಸ್ಯೆ ಹೀಗೆ ಹಲವು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹರಿರಾಂ ಸಮ್ಮುಖದಲ್ಲಿ ಸುದೀರ್ಘ ಚರ್ಚೆ ನಡೆಸಿ ಪರಿಹರಿಸಲು ಒತ್ತಾಯಿಸಿ ಮನವಿ ನೀಡಲಾಯಿತು.
ನೀಯೋಗದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ಭಾಸ್ಕರ ಮಾಸ್ಟರ್ ಕುಂಜಿಬೆಟ್ಟು, ಸುರೇಶ ಹಕ್ಲಾಡಿ, ಶ್ಯಾಮಸುಂದರ ತೆಕ್ಕಟ್ಟೆ, ಮಂಜುನಾಥ ನಾಗೂರು, ಅಣ್ಣಪ್ಪ ನಕ್ರೆ, ತಾಲೂಕು ಸಂಚಾಲಕರಾದ ಶಿವರಾಜ್ ಬೈಂದೂರು, ರಾಜು ಬೆಟ್ಟಿನಮನೆ, ಹರೀಶ್ಚಂದ್ರ ಬಿರ್ತಿ, ರಾಘವ ಕುಕುಜೆ, ರಾಜೇಂದ್ರ ಮಾಸ್ಟರ್ ಬೆಳ್ಳೆ , ರಾಘವ ಕೋಟ್ಯಾನ್, ಕೀರ್ತಿ ಕುಮಾರ್ ಪಡುಬಿದ್ರಿ ಮೊದಲಾದವರು ಉಪಸ್ಥಿತರಿದ್ದರು.