×
Ad

ಗಣೇಶ ಹಬ್ಬ ಆಚರಣೆ ಹಿನ್ನೆಲೆ: ಮದ್ಯ ಮಾರಾಟ ನಿಷೇಧ

Update: 2025-08-26 19:23 IST

ಉಡುಪಿ, ಆ.26: ಬುಧವಾರ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968ರ ನಿಯಮ 3ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಆ.27ರಂದು ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12:00 ಗಂಟೆಯವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಇದರೊಂದಿಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಆಗಸ್ಟ್ 29 ಮತ್ತು 31 ರಂದು ಅಪರಾಹ್ನ 2 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲೆ ತಿಳಿಸಲಾದ ದಿನಗಳಂದು ಜಿಲ್ಲೆಯಲ್ಲಿ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News