ಕೃಷಿ ಪಂಡಿತ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ, ಆ.26: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿಗೆ ಕೆ-ಕಿಸಾನ್ ಪೋರ್ಟಲ್‌ನಡಿ ಆರ್.ಎಸ್.ಕೆ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಅಥವಾ ಸ್ವತಃ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿಯನ್ನು ಬಳಸಿಕೊಂಡು ಆನ್‌ಲೈನ್ ಮೂಲಕ ಆಗಸ್ಟ್ 30ರ ಒಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.