ಎಚ್‌ಐವಿ ಬಗ್ಗೆ ಜನ ಜಾಗೃತಿಗಾಗಿ ಉಡುಪಿ ಜಿಲ್ಲಾ ಮಟ್ಟದ ಮ್ಯಾರಾಥಾನ್ -ಸೈಕ್ಲಾಥಾನ್
ಉಡುಪಿ, ಆ.31: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಉಡುಪಿ ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಶಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಎಚ್‌ಐವಿ /ಏಡ್ಸ್ ಕುರಿತು ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಮ್ಯಾರಾಥಾನ್ ಹಾಗೂ ಸೈಕ್ಲಾಥಾನ್ ಕಾರ್ಯಕ್ರಮವನ್ನು ರವಿವಾರ ಆಯೋಜಿಸಲಾಗಿತ್ತು.
ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಮ್ಯಾರಾಥಾನ್ ಹಾಗೂ ಸೈಕ್ಲಾಥಾನ್‌ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಪಂ ಮುಖ್ಯಕಾರ್ಯನಿರ್ವಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ.ನಿತ್ಯಾನಂದ ನಾಯಕ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ ಚಿದಾನಂದ ಸಂಜು ಮೊದಲಾದವರು ಉಪಸ್ಥಿತರಿದ್ದರು.