×
Ad

ಕಾರ್ಕಳ: ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Update: 2025-09-01 22:22 IST

ಕಾರ್ಕಳ : ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆಯಲ್ಲಿ 39 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಪ್ರಭಾಕರ್ ಜೈನ್ ಮತ್ತು ಹಿಂದಿ ಶಿಕ್ಷಕರಾಗಿ 34 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿ ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೈದು ಸೇವಾ ನಿವೃತ್ತಿ ಹೊಂದಿದ ಯೋಗರಾಜ್ ಬಸ್ತಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಚಾಲಕರಾದ ಹಿರಿಯ ನ್ಯಾಯವಾದಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ ಎಂ.ಕೆ ವಿಜಯಕುಮಾರ್ ಮಾತನಾಡಿ ಈರ್ವರು ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಭಾವುಕರಾಗಿ ಸ್ಮರಿಸಿ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರಿಜಮ್ಮ, ಆಡಳಿತ ಮಂಡಳಿಯ ಸದಸ್ಯರಾದ ಅನಂತ ರಾಜ್ ಪೂವಣಿ, ಅಂಡಾರು ಮಹಾವೀರ ಹೆಗ್ಡೆ, ಅಶೋಕ್ ಬಲ್ಲಾಳ್, ಸಂಪತ್ ಸಾಮ್ರಾಜ್ಯ , ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಉಷಾ ಪಡಿವಾಳ್ ಸ್ವಾಗತಿಸಿ ಶುಭ ಹಾರೈಸಿದರು. ನಿವೃತ್ತ ಶಿಕ್ಷಕರನ್ನು ಅಭಿನಂದನಾ ಪತ್ರ ಮತ್ತು ಫಲ - ಪುಷ್ಪದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಸೇವಾ ನಿವೃತ್ತಿ ಹೊಂದಿದ ಶಿಕ್ಷಕರು ಮಾತನಾಡಿ ಸಂಚಾಲಕರಿಗೆ ಆಡಳಿತ ಮಂಡಳಿಗೆ, ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು .ಆಡಳಿತ ಮಂಡಳಿಯ ಇತರ ಸದಸ್ಯರು, ವಿವಿಧ ಸಂಘಗಳ ಅಧ್ಯಕ್ಷರು, ಸದಸ್ಯರು, ನಿವೃತ್ತ ಶಿಕ್ಷಕರು,ಕಾಲೇಜು ವಿಭಾಗದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಮತ್ತು ಶಿಕ್ಷಕರು, ಸಂಸ್ಥೆಯ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹಳೆ ವಿದ್ಯಾರ್ಥಿಗಳು, ಶಾಲಾ ವಿದ್ಯಾರ್ಥಿಗಳು, ಹಿತೈಷಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಹ ಶಿಕ್ಷಕಿ ದಿವ್ಯಜ್ಯೋತಿ ಕಾರ್ಯಕ್ರಮ ನಿರೂಪಿಸಿ, ಅಮೃತಾ ವಂದಿಸಿದರು.



 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News