×
Ad

ಪಿ.ಎಂ.ಇ.ಜಿ.ಪಿ ಯೋಜನೆ: ಅರ್ಜಿ ಆಹ್ವಾನ

Update: 2025-09-02 20:28 IST

ಉಡುಪಿ, ಸೆ.2: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶದಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ಅರ್ಹ 18 ವರ್ಷ ಮೇಲ್ಪಟ್ಟ ಯುವಕ ಹಾಗೂ ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ 50 ಲಕ್ಷ ರೂ. ಉತ್ಪಾದನಾ ಚಟುವಟಿಕೆ ಮತ್ತು 20 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸುವ ಘಟಕಗಳಿಗೆ ಯೋಜನಾ ವೆಚ್ಚದ ಮೇಲೆ ಶೇ.25 ರಿಂದ 35ರವರೆಗೆ ಹಾಗೂ ನಗರ ಪ್ರದೇಶದಲ್ಲಿ ಸ್ಥಾಪಿಸುವ ಘಟಕಗಳಿಗೆ ಯೋಜನಾ ವೆಚ್ಚದ ಮೇಲೆ ಶೇ.15ರಿಂದ 25ರವರೆಗೆ ಸಹಾಯಧನ ನೀಡಲಾಗುವುದು.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ), ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820- 2574855ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News