×
Ad

ಉಡುಪಿ ಎಂಜಿಎಂ ಕಾಲೇಜಿನಲ್ಲಿ ಓಣಂ ಸಂಭ್ರಮ

Update: 2025-09-04 20:02 IST

ಉಡುಪಿ, ಸೆ.4: ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಹಾಗೂ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ’ಓಣಂ ಸಂಭ್ರಮ’ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಕೇರಳ ಕಲ್ಚರಲ್ ಅಂಡ್ ಸೋಷಿಯಲ್ ಸೆಂಟರ್ ಉಡುಪಿ ಅಸೋಸಿಯೇಷನ್‌ನ ಕಾರ್ಯದರ್ಶಿ ಬಿನೇಶ್ ವಿ.ಸಿ., ಓಣಂ ಹಿನ್ನಲೆ ಹಾಗೂ ಮಹತ್ವದ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತ ಮಯ್ಯ, ಉಪ್ರಪ್ರಾಂಶುಪಾಲ ಡಾ.ಎಂ. ವಿಶ್ವನಾಥ್ ಪೈ, ಐಕ್ಯೂಎಸಿ ಸಂಯೋಜಕಿ ಪ್ರೊ.ಶೈಲಜಾ ಎಚ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ವೀರಾ ಐಡಾ ಪಿಂಟೋ, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರೊ.ಸುಚಿತ್ ಕೋಟ್ಯಾನ್, ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ವಿಜಯ್ ಕುಮಾರ್ ಕೆ.ಎಂ. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ವಿಶ್ರತಾ ಸ್ವಾಗತಿಸಿದರು. ಅನುಶ್ರೀ ವಂದಿಸಿದರು. ಅಮಿಷಾ ಓಣಂ ಹಬ್ಬದ ವಿಶೇಷತೆಯ ಕುರಿತಾಗಿ ಪ್ರಾಸ್ತಾವಿಕ ಮಾತನ್ನಾಡಿದರು. ತ್ರಿವೇಣಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಂತರ ಓಣಂ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮನೋರಂಜನಾ ಸ್ಪರ್ಧೆಗಳು ನಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News