ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಸಂಭ್ರಮ
Update: 2025-09-04 21:09 IST
ಕುಂದಾಪುರ, ಸೆ.4: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಸೆ.3ರಂದು ಆಚರಿಸಲಾಯಿತು.
ಕಾರ್ಯಕ್ರಮವನ್ನು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೆನಿಫರ್ ಫ್ರೀಡಾ ಮೆನೆಜಸ್ ಉದ್ಘಾಟಿಸಿದರು. ರಿಸನ್ನ ಹಾಗೂ ಎನ್.ಎಸ್. ನಿಖಿತಾ ಓಣಂ ಹಬ್ಬದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮನರಂಜನೆಯ ಆಟಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತರಿಗೆ ಬಹುಮಾನಗಳನ್ನು ವಿತರಿಸ ಲಾಯಿತು. ವಿದ್ಯಾರ್ಥಿಗಳು ಸಾಂಪ್ರದಾಯಿಕ ತಿರುವಾತಿರ ನೃತ್ಯ ಪ್ರದರ್ಶಿಸಿದರು. ಸಿಂಸಿ ಸ್ವಾಗತಿಸಿದರು. ಚಂದ್ರಶೇಖರ್ ಕಾರ್ಯಕ್ರಮ ಸಂಯೋಜಿಸಿದರು. ಟೆಸ್ಕಾ, ಸೋನಾ ಹಾಗೂ ನಿಧಿ ಕಾರ್ಯಕ್ರಮ ನಿರೂಪಿಸಿದರು. ಸೋನಾ ವಂದಿಸಿದರು.