×
Ad

ಉಡುಪಿ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಕೋಚಿಂಗ್ ಕೇಂದ್ರಗಳ ನೋಂದಣಿ ಕಡ್ಡಾಯ

Update: 2025-09-04 21:43 IST

ಉಡುಪಿ, ಸೆ.4: ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ ಪ್ರಕರಣದಲ್ಲಿ ನೀಡಿರುವ ನಿರ್ದೇಶನ ದಂತೆ ಜಿಲ್ಲೆಯಲ್ಲಿ ಕಾರ್ಯಾಚರಿ ಸುತ್ತಿರುವ ಎಲ್ಲಾ ಸರಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ, ಕೋಚಿಂಗ್ ಕೇಂದ್ರ ಮತ್ತು ತರಬೇತಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮ ವನ್ನು ಖಾತ್ರಿಪಡಿಸುವ ನೀತಿಗಳು, ಮಾನಸಿಕ ಬೆಂಬಲ, ಸುರಕ್ಷಿತ ವಾತಾವರಣ ಮತ್ತು ತಾರತಮ್ಮ ರಹಿತ ಶಿಕ್ಷಣ ನೀಡುವ ಕುರಿತು ‘ಏಕರೂಪದ ಮಾನಸಿಕ ಆರೋಗ್ಯ ನೀತಿ’ಯನ್ನು ಜಾರಿ ಗೊಳಿಸಿ, ಅನುಷ್ಠಾನಗೊಳಿಸಬೇಕಾಗಿದೆ.

ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಕೋಚಿಂಗ್ ಕೇಂದ್ರಗಳು ಕರ್ನಾಟಕ ಟ್ಯುಟೋರಿಯಲ್ ಇನ್‌ಸ್ಟಿಟ್ಯೂಷನ್ಸ್ (ರಿಜಿಸ್ಟ್ರೇಷನ್ ಆ್ಯಂಡ್ ರೆಗ್ಯುಲೇಷನ್) ರೂಲ್ಸ್ 2001ರನ್ವಯ ಕಡ್ಡಾಯವಾಗಿ 30 ದಿನದೊಳಗೆ ಮ್ಮ ಕೋಚಿಂಗ್ ಕೇಂದ್ರ ಕಾರ್ಯಾಚರಿಸುತ್ತಿರುವ ಬಗ್ಗೆ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಇವರಲ್ಲಿ ನೊಂದಣಿ ಮಾಡಿಕೊಳ್ಳಬೇಕು. ತಪ್ಪಿದ್ದಲ್ಲಿ ನೊಂದಣಿ ಮಾಡಿಸದೇ ಇರುವ ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಲು ನಿಯಮಾ ನುಸಾರ ಕ್ರಮ ಜರುಗಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News