ವ್ಯಕ್ತಿ ನಾಪತ್ತೆ
Update: 2025-09-10 19:52 IST
ಉಡುಪಿ: ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಶಾಂತಿನಗರ ಜಂಕ್ಷನ್ ಬಳಿಯಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಿದ್ದ ರೋಹನ್ ಕುಮಾರ್ ಶೆಟ್ಟಿಯಾನ್ (೪೫) ಎಂಬವರು ಕಳೆದ ಸೆ.6ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಹಿಂದಿ, ತುಳು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.