×
Ad

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೋರ್ ಕಮಿಟಿ ರಚನೆ

Update: 2025-09-11 20:56 IST

ಉಡುಪಿ, ಸೆ.11: ಪಕ್ಷ ಸಂಘಟನೆ ಮತ್ತು ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಿರ್ಧಾರ ಕೈಗೊಳ್ಳಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೋರ್ ಕಮಿಟಿಯನ್ನು ರಚಿಸಲಾಗಿದೆ.

ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಉಪಸ್ಥಿತಿಯಲ್ಲಿ ಸೆ.5ರಂದು ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರ ನೇಮಕಾತಿ ಕುರಿತಂತೆ ಚರ್ಚೆ ನಡೆಸಿ, ಪಟ್ಟಿಯನ್ನು ಕಳುಹಿಸಿ ಕೊಟ್ಟಿದ್ದು, ಇದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅನುಮೋದನೆ ನೀಡಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೋರ್ ಕಮಿಟಿ ಸದಸ್ಯರನ್ನಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಮಾಜಿ ಶಾಸಕ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಮಾಜಿ ಶಾಸಕ ಗೋಪಾಲ್ ಪೂಜಾರಿ, ದಿನೇಶ್ ಹೆಗ್ಡೆ, ಪ್ರಸಾದ್‌ರಾಜ್ ಕಾಂಚನ್, ಮುನಿಯಲ್ ಉದಯ ಕುಮಾರ್ ಶೆಟ್ಟಿ, ರಾಜು ಪೂಜಾರಿ, ಕಿಶನ್ ಹೆಗ್ಡೆ ಅವರನ್ನು ನೇಮಕ ಮಾಡಲಾಗಿದೆ.

ಕೋರ್ ಕಮಿಟಿಯ ಸದಸ್ಯರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಮತ್ತು ಸರಕಾರದಿಂದ ನೇಮಿಸುವ ನಾಮ ನಿರ್ದೇಶನದ ಬಗ್ಗೆ ಹಾಗೂ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆ ನಡೆಸಿ ನಿರ್ಧಾರಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News