×
Ad

ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಡುಪಿ ಜಿಲ್ಲಾ ಪ್ರವಾಸ ರದ್ದು

Update: 2025-09-15 20:51 IST

ಉಡುಪಿ, ಸೆ.15: ಕರ್ನಾಟಕ ಸರಕಾರದ ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರ ಸೆ.16ರ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮ ಮುಂದೂಡಿಕೆ: ಸೆ.16 ಮಂಗಳವಾರ ಬೆಳಗ್ಗೆ 11 ಗಂಟೆಗೆ ನಗರದ ಮಿಷನ್ ಕಾಂಪೌಂಡ್‌ನ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಿಗದಿಯಾಗಿದ್ದ ಉಡುಪಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘ ಟಿತ ಕಾರ್ಮಿಕರಿಗೆ ಸ್ಮಾರ್ಟ್‌ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಕಾರಣಾಂತರ ಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News