×
Ad

ಸಹಕಾರಿ ಕ್ಷೇತ್ರಕ್ಕೆ ಸಮಸ್ಯೆಯಾದರೆ ಕಾನೂನು ಹೋರಾಟ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ವಾರ್ಷಿಕ ಮಹಾಸಭೆ

Update: 2025-09-16 18:21 IST

ಉಡುಪಿ, ಸೆ.16: ಸಹಕಾರಿ ಕ್ಷೇತ್ರಕ್ಕೆ ತೊಂದರೆ ಎದುರಾದರೆ ಅದನ್ನು ಜನಪ್ರತಿನಿಧಿಗಳ ಮೂಲಕ ಸರಿಪಡಿಸ ಲಾಗುವುದು. ಇದಕ್ಕೆ ಯಾವುದೇ ಸ್ಪಂದನೆ ದೊರೆಯದಿದ್ದರೆ ನ್ಯಾಯಾಲಯದ ಮೂಲಕ ಕಾನೂನು ಹೋರಾಟ ಮಾಡಲಾಗುವುದು. ಜಿಲ್ಲೆಯಲ್ಲಿ 2.60 ಲಕ್ಷ ರೂ. ಶಿಕ್ಷಣ ನಿಧಿಯನ್ನು ಮಹಾಮಂಡಳಕ್ಕೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಅಜ್ಜರಕಾಡಿನ ಪುರಭವನದಲ್ಲಿ ಮಂಗಳವಾರ ನಡೆದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಹಾಗೂ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವ ಮೊದಲು ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸು ವುದು ಸೂಕ್ತ. ಇಲ್ಲದಿದ್ದರೆ ಸಹಕಾರಿ ಕ್ಷೇತ್ರ ಮುಂದಿನ ದಿನಗಳಲ್ಲಿ ಯಾವ ಮಟ್ಟಕ್ಕೆ ಹೋಗಬಹುದು ಎಂಬುವುದನ್ನು ಯೋಚಿಸಬೇಕಾಗಿದೆ. ಸರಕಾರಿಯ ಇಲಾಖೆಯ ಖಾತೆಯನ್ನು ಸಹಕಾರಿ ಬ್ಯಾಂಕ್‌ಗಳಲ್ಲಿ ತೆರೆಯಲು ಅವಕಾಶ ಮಾಡಿಕೊಡಬೇಕು. ಆಗ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವ ಬಗ್ಗೆ ಚಿಂತಿಸಬಹುದು ಎಂದರು.

ವೇದಿಕೆಯಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ನಿರ್ದೇಶಕರಾದ ಗಂಗಾಧರ ಶೆಟ್ಟಿ, ಎ.ಹರೀಶ್ ಕಿಣಿ, ಸುರ್ಧೀ ವೈ, ಅನಿಲ್ ಎಸ್.ಪೂಜಾರಿ, ಪ್ರಸಾದ್ ಎಸ್.ಶೆಟ್ಟಿ, ಎನ್. ಮಂಜಯ್ಯ ಶೆಟ್ಟಿ, ಪ್ರದೀಪ ಯಡಿಯಾಳ, ಬಿ.ಅರುಣ್ ಕುಮಾರ್ ಹೆಗ್ಡೆ, ಬಿ.ಕರುಣಾಕರ ಶೆಟ್ಟಿ, ಕೆ.ಸುರೇಶ್ ರಾವ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯೂನಿಯನ್ ವತಿಯಿಂದ ಏರ್ಪಡಿಸಲಾದ ಚರ್ಚಾ ಹಾಗೂ ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸ ಲಾಯಿತು. ಯೂನಿಯನ್ ಕಾರ್ಯಕ್ರಮಗಳಲ್ಲಿ ಸಹಯೋಗದ ನೀಡಿದ ಸೊಸೈಟಿಯ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿ, ವರದಿ ಮಂಡಿಸಿದರು. ನಿರ್ದೇಶಕ ಶ್ರೀಧರ್ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News