ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2025-09-22 20:45 IST
ಬ್ರಹ್ಮಾವರ, ಸೆ.22: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಆರೂರು ಗ್ರಾಮದ ಮೋಹನ್(47) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.18ರ ಸಂಜೆಯಿಂದ ಸೆ.20ರ ಸಂಜೆಯ ಮಧ್ಯಾವಧಿಯಲ್ಲಿ ಆರೂರು ಗ್ರಾಮದ ಮೇಲಡ್ಪು ಹಾಡಿಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಮದ್ಯ ಸೇವಿಸಿ ಪತ್ನಿ ಜೊತೆ ಗಲಾಟೆ ಮಾಡಿದ ಶೇಖರ ಪೂಜಾರಿ(70) ಎಂಬವರು ಮನೆಯಲ್ಲಿದ್ದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರು ಕುಂದಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ.22ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.