ಅಪರಿತ ವಾಹನ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಕಾಪು: ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ವೇಳೆ ಕಾಪು ಸಮೀಪದ ದಂಡತೀರ್ಥ ಶಾಲೆಯ ಎದುರು ನಡೆದಿದೆ.
ಮೃತರನ್ನು ಉಡುಪಿ ಕಲ್ಯಾಣಪುರ ಸಂತೆಕಟ್ಟೆ ನಿವಾಸಿ ಕರುಣಾಕರ ಭಂಡಾರಿ ಎಂಬವರ ಮಗ ಅನುಷ್ ಭಂಡಾರಿ (21) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಿಂದ ಉಡುಪಿಯಲ್ಲಿರುವ ತನ್ನ ಮನೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ವಾಹನ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆ ಬಿದ್ದ ಅನುಷ್ ಮೇಲೆ ಇತರ ವಾಹನಗಳು ಹರಿದು ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಮೃತದೇಹವನ್ನು ಸಾಮಾಜಿಕ ಕಾರ್ಯಕರ್ತರಾದ ಜಲಾಲುದ್ದೀನ್ ಉಚ್ಚಿಲ, ಮೂಳೂರು ಎಸ್‌ಡಿಪಿಐ ಅಂಬ್ಯುಲೆನ್ಸ್ ಚಾಲಕ ಹಮೀದ್ ಪೊಲೀಸರ ಸಹಾಯದಿಂದ ಚೆಲ್ಲಾಪಿಲ್ಲಿಯಾದ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಅನುಷ್ 4 ತಿಂಗಳ ಹಿಂದೆ ಮಂಗಳೂರಿನ ಬೈಕಂಪಾಡಿಯಲ್ಲಿ ಇರುವ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಇವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.