ವಾಹನ ಢಿಕ್ಕಿ: ಅಪರಿಚಿತ ವ್ಯಕ್ತಿ ಮೃತ್ಯು
Update: 2025-09-24 20:52 IST
ಬೈಂದೂರು: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.23ರಂದು ರಾತ್ರಿ ವೇಳೆ ಯಡ್ತರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಭಾರತ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ವಾಹನವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 30-35 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆದು ಪರಾರಿಯಾಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಸೆ.24ರಂದು ಬೆಳಗ್ಗೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.