ಎನ್ನೆಸ್ಸೆಸ್ ದಿನಾಚರಣೆ- ವಾರ್ಷಿಕ ಉದ್ಘಾಟನಾ ಕಾರ್ಯಕ್ರಮ
ಉಡುಪಿ, ಸೆ.25: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೊತ್ತರ ಅಧ್ಯಯನ ಕೇಂದ್ರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಉದ್ಘಾಟನಾ ಕಾರ್ಯಕ್ರಮ ಹಾಗೂ ಎನ್ನೆಸ್ಸೆಸ್ ದಿನಾಚರಣೆ ಕಾರ್ಯಕ್ರಮವನ್ನು ಸೆ.24ರಂದು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ.ರಘುನಾಯ್ಕ್ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಪ್ರೊ.ನಿಕೇತನ, ತಮ್ಮ ಪರಿಚಯಾತ್ಮಕ ಮಾತಿನಲ್ಲಿ ವಿದ್ಯಾರ್ಥಿನಿಯರು ಎನ್ನೆಸ್ಸೆಸ್ ಮೂಲಕ ಸಮಾಜದೊಂದಿಗೆ ಹೊಂದಿಕೊಳ್ಳುವ ಮನೋಭಾವ, ಜವಾಬ್ದಾರಿತನ ಮತ್ತು ಶಿಸ್ತಿನ ಮಹತ್ವವನ್ನು ತಿಳಿಸಿದರು.
ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲ ಪ್ರೊ.ಕೃಷ್ಣಭಟ್ ವಹಿಸಿದ್ದರು. ಐಕ್ಯುಎಸಿ ಸಂಯೋಜಕ ಪ್ರೊ.ಶ್ರೀಮತಿ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ.ಜಯಮಂಗಲ, ಸ್ವಾಗತಿಸಿದರು. ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ.ರವೀಶ ಬಿ. ವಂದಿಸಿದರು. ಸೃಷ್ಠಿ ಕಾರ್ಯಕ್ರಮ ನಿರೂಪಿಸಿದರು.