×
Ad

ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

Update: 2025-09-25 19:27 IST

ಉಡುಪಿ, ಸೆ.25: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಕುಂದಾಪುರ ತಾಲೂಕು ಚಿತ್ತೂರು ಗ್ರಾಪಂ ಅಧ್ಯಕ್ಷ (ಮೀಸಲಾತಿ- ಸಾಮಾನ್ಯ) ಸ್ಥಾನವನ್ನು ಆಯ್ಕೆ ಮಾಡುವ ಸಲುವಾಗಿ ಗೊತ್ತುಪಡಿಸಿದ ಅಧಿಕಾರಿಯಾಗಿ ಕುಂದಾಪುರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ(ಮೊ-9449143880) ಹಾಗೂ ಹಂಗಳೂರು ಗ್ರಾಪಂ ಉಪಾಧ್ಯಕ್ಷ(ಮೀಸಲಾತಿ-ಸಾಮಾನ್ಯ) ಸ್ಥಾನವನ್ನು ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಕುಲಾಲ(ಮೊ:9113288169) ಅವರನ್ನು ನೇಮಿಸಲಾಗಿದೆ.

ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 45 ಹಾಗೂ(ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ) ನಿಯಮಗಳು 1995ರ ನಿಯಮ 4ರಿಂದ 11ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News