ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ
Update: 2025-09-25 20:11 IST
ಉಡುಪಿ, ಸೆ.25: ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಗುರುವಾರ ನಡೆಯಿತು.
ಅಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ರಾಮಚಂದ್ರ ರಾವ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕೊಡಗು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಭಾರತೀಶ್, ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹಾಗೂ ಜಿಲ್ಲಾ ಮೋರ್ಚಾ ಪ್ರಕೋಷ್ಠ, ಮಂಡಲ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಂ.ಅಂಚನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಕಳ ಮಂಡಲಾಧ್ಯಕ್ಷ ನವೀನ್ ನಾಯಕ್ ವಂದಿಸಿದರು.