×
Ad

ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ವಂಚನೆ ಪ್ರಕರಣ: ಆರೋಪಿ ಸೆರೆ

Update: 2025-09-29 21:57 IST

ಅಮಾಸೆಬೈಲು, ಸೆ.29: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ.

ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ. ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಣ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು.

ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಮಂಜುನಾಥ ಗೊಲ್ಲ ಆತನಿಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದು, ಆತ ನಾಳೆ ಕೊಡುವುದಾಗಿ ಹೇಳಿ ವಂಚಿಸಿದ್ದನು. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಆರೋಪಿ ಪ್ರವೀಣ್ ಎಂಬಾತನನ್ನು ಸೆ.29ರಂದು ಬಂಧಿಸಿ, ಕಾರು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News