ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ
Update: 2025-10-03 17:50 IST
ಉಡುಪಿ, ಅ.3: ಪರ್ಯಾಯ ಪುತ್ತಿಗೆ ಮಠ, ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಆಯೋಜಿಸಲಾದ ಸ್ವಚ್ಛ ಭಾರತ್ ಅಭಿಯಾನಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂಧ್ರ ತೀರ್ಥ ಸ್ವಾಮೀಜಿ ಶುಕ್ರವಾರ ಚಾಲನೆ ನೀಡಿದರು.
ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಪರಿಸರ ಸ್ವಚ್ಛತೆಯ ಮಹತ್ವ ತಿಳಿಸಿದರು. ಪತಂಜಲಿ ಜಿಲ್ಲಾ ಪ್ರಭಾರಿ ಕೆ.ರಾಘವೇಂದ್ರ ಭಟ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಸಂಚಾಲಕ ರಾದ ರಮಣಾಚಾರ್ಯ, ಪತಂಜಲಿ ಯೋಗ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.