ಆನ್‌ಲೈನ್ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
ಉಡುಪಿ, ಅ.6: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಇದೀಗ ಅ.14ರವರೆಗೆ ವಿಸ್ತರಿಸ ಲಾಗಿದೆ. ವಿದ್ಯಾರ್ಥಿಗಳು - https://shp.karnataka.gov.in/bcwd- ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಕುರಿತು ಹೆಚ್ಚಿನ ವಿವರಗಳಿಗಾಗಿ - https://bcwd.karnataka.gov.in-ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ - bcwdhelpline@gmail.com- ಇ-ಮೇಲ್ ಮೂಲಕ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.