ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು: ಪ್ರಕರಣ ದಾಖಲು
Update: 2025-10-08 21:17 IST
ಬೈಂದೂರು, ಅ.8: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗದು ಹಾಗೂ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಬಿಜೂರ ಗ್ರಾಮದ ಪರ್ಕೇರಿ ಎಂಬಲ್ಲಿ ಅ.5ರ ಬೆಳಗ್ಗೆಯಿಂದ ಅ.8ರ ಬೆಳಗ್ಗಿನ ಮಧ್ಯಾವಧಿಯಲ್ಲಿ ನಡೆದಿದೆ.
ಮುಂಬೈಯಲ್ಲಿ ವ್ಯವಹಾರ ಮಾಡಿಕೊಂಡಿರುವ ನಾಗರಾಜ್ ಭಟ್ ಎಂಬವರ ಮನೆಯ ಹಿಂದಿನ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಕಾಪಾಟಿನಲ್ಲಿದ್ದ 260000ರೂ. ನಗದು ಮತ್ತು ಸುಮಾರು ಎರಡೂವರೆ ಯಿಂದ 3 ಕೆಜಿ ತೂಕದ 2,50000ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಇವುಗಳ ಒಟ್ಟು ಮೌಲ್ಯ 5,10,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.