ಉಡುಪಿ: ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
Update: 2025-10-15 19:32 IST
ಉಡುಪಿ, ಅ.15: ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಂಜೀವಿನಿ ಸ್ವಸಹಾಯ ಗುಂಪು ಹಾಗೂ ಒಕ್ಕೂಟಗಳ ಬಲವರ್ಧನೆ, ಸಂಜೀವಿನಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ವಿವಿಧ ಸ್ವಉದ್ಯೋಗ ಹಾಗೂ ಪ್ರವಾಸೋದ್ಯಮ ಚಟುವಟಿಕೆ, ಹಣಕಾಸು ಸೇರ್ಪಡೆ ಹಾಗೂ ವಿವಿಧ ವಿಷಯಗಳ ಬಗ್ಗೆ ಸಂಸದರು ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಯೋಜನಾ ನಿರ್ದೇಶಕ ವಿಜಯ್ ಕುಮಾರ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ವಿಷಯ ನಿರ್ವಾಹಕ ಅನಂತಕೃಷ್ಣ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಡಾ.ಸೌಮ್ಯ ಕುಮಾರಿ, ಯತೀಶ್, ರವಿ, ಶಿವಾನಂದ್ ಮುಂತಾದವರು ಉಪಸ್ಥಿತರಿದ್ದರು.