ಅಲ್ಪಸಂಖ್ಯಾತ ಕಾನೂನು ಪದೀಧರರ ಶಿಷ್ಯವೇತನ: ಅರ್ಜಿ ಆಹ್ವಾನ
Update: 2025-10-15 19:37 IST
ಉಡುಪಿ, ಅ.15: 2025-26ನೇ ಸಾಲಿಗೆ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ (ಮುಸ್ಲಿಂ,ಕ್ರಿಶ್ಚಿಯನ್,ಜೈನ್,ಬೌದ್ದ ಮತ್ತು ಸಿಖ್) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳೊಂದಿಗೆ ಅ.31ರ ಒಳಗೆ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಳಿಗಾಗಿ ದೂ.ಸಂ: 0820-2574596ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.