ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಎಂ.ಎ. ಗಫೂರ್ ಗೆ ಅಭಿನಂದನೆ
Update: 2025-10-15 22:11 IST
ಕಾರ್ಕಳ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ವತಿಯಿಂದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎ.ಗಪೂರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮೊಹಮ್ಮದ್ ಮೌಲಾ, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ ಹುಸೈನ್ ಕಟಪಾಡಿ, ಹಿರಿಯ ಜಿಲ್ಲಾ ಉಪಾಧ್ಯಕ್ಷರಾದ ರಫೀಕ್ ಗಂಗೊಳ್ಳಿ, ಶಭಿ ಅಹ್ಮದ್ ಕಾಜಿ, ಮೌಲಾನಾ ಮುಸ್ತಫಾ ಸಅದಿ, ಇಬ್ರಾಹಿಂ ಸಾಹೇಬ್ ಕೋಟ, ಅಶ್ಫಾಕ್ ಕಾರ್ಕಳ, ಮೊಹಮ್ಮದ್ ಗೌಸ್ ಕಾರ್ಕಳ , ಜಫ್ರುಲ್ಲಾ ಹೂಡೆ, ಮೌಲಾನಾ ಜಮೀರ್ ರಶಾದಿ, ಜಿಲ್ಲಾ ಪದಾಧಿಕಾರಿಗಳು, ಎಲ್ಲಾ ತಾಲೂಕು ಅಧ್ಯಕ್ಷರು, ಜಿಲ್ಲಾ ಸದಸ್ಯರು ತಾಲೂಕು ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.