ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ, ಮಾದಕ ವ್ಯಸನ ವಿರೋಧಿ ಜಾಥಾ
ಉಡುಪಿ, ಅ.16: ಇಂದು ಮಾದಕ ವ್ಯಸನ ಮತ್ತು ಸೈಬರ್ ಕ್ರೈಂ ಇವೆರಡು ಯುವ ಸಮುದಾಯವನ್ನು ಕಾಡುತ್ತಿರುವ ಬಹು ದೊಡ್ಡ ಸಮಸ್ಯೆಗಳಾಗಿವೆ. ಈ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ. ಈ ಹಿನ್ನೆಲೆ ಯಲ್ಲಿ ಯುಜನೋತ್ಸವ ಮತ್ತು ಮಾದಕ ವ್ಯಸನ ವಿರೋಧಿ ಜಾಥಾ ಉಪಯುಕ್ತ ಕಾರ್ಯಕ್ರಮ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಘಟಕ, ಸಾಂಸ್ಕೃತಿಕ ಸಮಿತಿ, ಉಡುಪಿಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಲಯನ್ಸ್ ಕ್ಲಬ್ ಅಮೃತ್, ನೆಹರು ಯುವ ಕೇಂದ್ರ ಉಡುಪಿ ಹಾಗೂ ನೀಲಾವರದ ಚೈತನ್ಯ ಯುವಕ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ಅಮೃತ ಗಾರ್ಡನ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಭೆಯ ಅಧ್ಯಕ್ಷತೆಯನ್ನು ಸರಕಾರಿ ಪ್ರ.ದ.ಕಾಲೇಜು ತೆಂಕನಿಡಿಯೂರಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ಗಾಂವ್‌ಕರ್ ವಹಿಸಿದ್ದರು. ಮಾದಕ ವ್ಯಸನ ಮತ್ತು ಸೈಬರ್ ಕ್ರೈಂ ಅಪರಾಧಗಳ ವಿರುದ್ಧ ಆಯೋಜಿಸಲಾಗಿದ್ದ ಜಾಥಾವನ್ನು ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಜಾಥಾ ಮತ್ತು ಯುವಜನೋತ್ಸವದ ಮಹತ್ವವನ್ನು ವಿವರಿಸಿ ದರು. ಕಾರ್ಕಳ ಉಪವಿಭಾಗದ ಸಹಾಯಕ ಪೋಲಿಸ್ ಅಧೀಕ್ಷಕಿ ಡಾ. ಹರ್ಷ ಪ್ರಿಯಂವದಾ ಅವರು ಮಾದಕ ವ್ಯಸನ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿಗಳನ್ನು ನೀಡಿದರು.
ಲಯನ್ಸ್ ಕ್ಲಬ್ ಅಮೃತ್ ಅಧ್ಯಕ್ಷ ಗೋಪಾಲ್ ಅಂಚನ್, ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್ ಅಧ್ಯಕ್ಷ ಪುರುಷೋ ತ್ತಮ, ಚೈತನ್ಯ ಯುವಕ ಮಂಡಲ ನೀಲಾವರ ಇದರ ಅಧ್ಯಕ್ಷರಾದ ಶ್ಯಾಮರಾಯ್ ಆಚಾರ್ಯ, ಗೌರವಾಧ್ಯಕ್ಷ ಹಾಗೂ ಹೋಮ್‌ಗಾರ್ಡ್ ಸೇವೆಗೆ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಮಂಜುನಾಥ ಶೆಟ್ಟಿಗಾರ್, ಸಾಂಸ್ಕೃತಿಕ ಸಂಚಾಲಕ ಕೃಷ್ಣ ಸಾಸ್ತಾನ ಉಪಸ್ಥಿತರಿದ್ದರು.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೆಂಕನಿಡಿಯೂರಿನ ರೆಡ್‌ಕ್ರಾಸ್ ಘಟಕದ ಸಂಚಾಲಕ ಪ್ರೊ.ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಬಳಿಕ ಯುವಕರಿಗಾಗಿ ವಿವಿಧ ಸ್ವರ್ಧೆಗಳನ್ನು ಆಯೋಜಿಸಲಾಗಿತ್ತು. ಜಾಥಾದಲ್ಲಿ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈಜಿ. ಖಜಾಂಚಿ ರಮಾದೇವಿ ಮತ್ತಿತರರು ಉಪಸ್ಥಿತರಿದ್ದರು.