ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2025-10-16 20:11 IST
ಉಡುಪಿ, ಅ.16: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ 2023ರ ಜನವರಿಯಿಂದ 2025ರ ಡಿಸೆಂಬರ್ ತಿಂಗಳಿನೊಳಗೆ ಒಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2026ರ ಜನವರಿ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಅಕಾಡೆಮಿ ವೆಬ್‌ಸೈಟ್ - https://kstcademy.in-ಅನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.